ಸಿಹಿ ಸುದ್ದಿ ನೀಡಿದ ಸರ್ಕಾರ

ಸಿಹಿ ಸುದ್ದಿ ನೀಡಿದ ಸರ್ಕಾರ

ಬೆಂಗಳೂರು : ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಹೊಸ ವಾಹನಗಳ ನೋಂದಣಿ ಹೊರತುಪಡಿಸಿ ಅನ್ವಯಿಸುವಂತೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ವಾಹನ ತೆರಿಗೆ ಪಾವತಿಸುವವರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಿದ್ದಾರೆ.
ಅಧಿಸೂಚನೆ ಸಂಖ್ಯೆ ಟಿಡಿ 1 ಟಿಡಿಆರ್ 2021 ಏ. 12, 2021 ಅನ್ವಯ ಏ. 15ರ ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಏ. 30 ರವರೆಗೆ ವಿಸ್ತರಿಸಿದ ಅವಧಿಯನ್ನು ಮತ್ತು ಮೇ 15 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆ ದಂಡ ರಹಿತವಾಗಿ ಪಾವತಿಸಲು ಮೇ 31 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Related