ಗ್ಯಾರಂಟಿಗಳ ಬಗ್ಗೆ ಪ್ರಸಂಶ ವ್ಯಕ್ತಪಡಿಸಿದ ರಾಜ್ಯಪಾಲರು   

ಗ್ಯಾರಂಟಿಗಳ ಬಗ್ಗೆ ಪ್ರಸಂಶ ವ್ಯಕ್ತಪಡಿಸಿದ ರಾಜ್ಯಪಾಲರು   

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗಣರಾಜ್ಯೋತ್ಸವವನ್ನು ರಾಜ್ಯದಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇನ್ನು ಬೆಂಗಳೂರು ನಗರ ದಲ್ಲಿರುವಂತಹ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಗೆಹ್ಲೋಟ್ ರವರು ಧ್ವಜಾರೋಹಣ ನೆರವೇರಿಸಿದರು.

ಇನ್ನು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ರಾಜ್ಯಪಾಲರು, ಜನವರಿ 26 ಇದು ಭಾರತದ ಇತಿಹಾಸದ ವಿಶೇಷ ದಿನ. ಇದನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ. ಸಮಗ್ರತೆ, ಏಕತೆಯನ್ನ ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನ ಹೊಂದಿದೆ.

ಸರ್ಕಾರವು 5 ಗ್ಯಾರೆಂಟಿಗಳನ್ನ ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಎಲ್ಲ ಐದು ಗ್ಯಾರೆಂಟಿಗಳನ್ನ ಅನುಷ್ಠಾನಗೊಳಿಸಲಾಗಿದೆ. ಶಕ್ತಿ & ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಮಾಸಿಕ ₹2,000 ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಭೀಕರ ಬರಗಾಲ ಹಿನ್ನೆಲೆ ಬರಪೀಡಿತ ತಾಲೂಕುಗಳನ್ನ ಘೋಷಿಸಲಾಗಿದೆ ಎಂದರು.

 

Related