ಅಗ್ನಿಶಾಮಕ ದಳ ಕಚೇರಿಯಲ್ಲಿಯೇ ಭರ್ಜರಿ ಪಾರ್ಟಿ

ಅಗ್ನಿಶಾಮಕ ದಳ ಕಚೇರಿಯಲ್ಲಿಯೇ ಭರ್ಜರಿ ಪಾರ್ಟಿ

ಬೆಳಗಾವಿ : ಅಥಣಿ ಪಟ್ಟಣದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಚೇರಿ ಆವರಣದಲ್ಲಿಯೇ ರಾಜಾರೋಷವಾಗಿ ಮದ್ಯ, ಬಾಡೂಟದ ಪಾರ್ಟಿ ನಡೆಸಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮಧ್ಯಾಹ್ನದ ಹೊತ್ತಿನಲ್ಲಿ ಅಥಣಿಯ ಅಗ್ನಿ ಶಾಮಕ ದಳದ ನಾಲ್ಕೈದು ಜನ ಸಿಬ್ಬಂದಿಗೆ ಯಾರೂ ಹೇಳುವವರೂ ಇಲ್ಲ, ಕೇಳುವವರೂ ಇಲ್ಲದಂತಾಗಿದೆ. ಸಿಬ್ಬಂದಿ ಶಿಸ್ತು ಮರೆತು ಹೀಗೆ ಹಗಲು ಹೊತ್ತಿನಲ್ಲಿಯೇ ಪಾರ್ಟಿ ಮಾಡುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಲಾಕ್‌ಡೌನ್ ವೇಳೆ ಇಂಥ ಮೋಜು-ಮಸ್ತಿ ಮಾಡುತ್ತಿರುವ ಬಗ್ಗೆ ಸ್ಥಳೀಯ ಮಾಧ್ಯಮದವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.
ಆಗ ಇದನ್ನು ಕಂಡ ಕೂಡಲೇ ಊಟ ಮಾಡುತ್ತಿದ್ದೇವೆ ಎಂದು ಸಬೂಬು ಹೇಳಿದ್ದಾರೆ.

Related