ಜಿಲ್ಲಾ ಜನಜಾಗೃತಿ ವಾಹನಕ್ಕೆ ಹಸಿರು ನಿಶಾನೆ

ಜಿಲ್ಲಾ ಜನಜಾಗೃತಿ ವಾಹನಕ್ಕೆ ಹಸಿರು ನಿಶಾನೆ

ಹೊಸಪೇಟೆ : ಇತ್ತೀಚಿನ ದಿನಗಳಲ್ಲಿ ಆದರಲ್ಲೂ ಲಾಕ್‌ಡೌನ್ ಸಮಯದಲ್ಲೇ ಅತೀ ಹೆಚ್ಚು ಬಾಲ್ಯವಿವಾಹ ದೂರು ದಾಖಲಾಗಿದ್ದು, ನೂರಕ್ಕೂ ಹೆಚ್ಚು ಬಾಲ್ಯವಿವಾಹಗಳನ್ನು ಇಲಾಖೆಯ ವತಿಯಿಂದ ತೆಡೆಗಟ್ಟಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಅಮರೇಶ್ ಅವರು ತಿಳಿಸಿದರು.

ನಗರದ ತಾಲ್ಲೂಕು ಪಂಚಾಯತಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಾಲ್ಯವಿವಾಹ ನಿಷೇಧ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಕುರಿತಾದ ಜನಜಾಗೃತಿ ಜಾಥಾ ಸಂಚಾರಿ ವಾಹನಕ್ಕೆ ಹಸಿರು ನಿಶಾನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾ. ಪಂ ಅಧ್ಯಕ್ಷೆ ನಾಗವೇಣಿ ಬಸವರಾಜ್ ಮಾತನಾಡಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯವಿವಾಹ ಸೇರಿದಂತೆ ಮಕ್ಕಳ ದೌರ್ಜನ್ಯ ಪ್ರಕರಣಗಳ ವಿರುದ್ಧ ಜನರಿಗೆ ಜಾಗೃತಿ ಮೂಡಿಸಲು ಸಂಚಾರಿ ವಾಹನದ ಕಾರ್ಯಕ್ರಮ ಹೆಚ್ಚು ಉಪಯುಕ್ತವಾಗಲಿದೆ ಎಂದರು.
ತಹಶೀಲ್ದಾರ್ ಅಮರ್‌ನಾಥ್ ಮಾತನಾಡಿ, ಜನರಿಗೆ ತಿಳಿವಳಿಕೆಗಿಂತ ಅನುಭವ ಹೆಚ್ಚು ಜಾಗೃತಿ ಮೂಡಿಸುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಾರ್ಯ ಶ್ಲಾಘನೀಯವಾದುದು ಎಂದರು.

ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸುವ ಜನಜಾಗೃತಿ ವಾಹನವು ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಕಾಣೆಯಾದ ಮಕ್ಕಳು, ದೌರ್ಜನ್ಯಕ್ಕೊಳಗಾದ ಮಕ್ಕಳು, ವಿಕಲಚೇತನ ಮಕ್ಕಳು, ನಿರ್ಗತಿಕ ಮಕ್ಕಳು ಸಹಾಯಕ್ಕಾಗಿ ಜಾರಿಗೆ ತಂದಿರುವ 1098 ಚೈಲ್ಡ್ಲೈನ್ ಮಕ್ಕಳ ಸಹಾಯವಾಣಿ ಕುರಿತು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಘೋಷಣಾ ಅಭಿಯಾನದ ಉದೇಶಗಳು, ಮಕ್ಕಳ ರಕ್ಷಣ ಘಟಕದ ಕಾರ್ಯನಿರ್ವಹಣೆ ಕುರಿತಾದ ಮಾಹಿತಿ ಮತ್ತು ಜನಜಾಗೃತಿಯನ್ನು ಮೂಡಿಸಲಾಗುತ್ತದೆ.

Related