ಡಿಸೆಂಬರ್ 5ರ ಕರ್ನಾಟಕ ಬಂದ್ ಖಚಿತ

ಡಿಸೆಂಬರ್ 5ರ ಕರ್ನಾಟಕ ಬಂದ್ ಖಚಿತ

ಬೆಂಗಳೂರು : ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 5 ರ ಕರ್ನಾಟಕ ಬಂದ್ ಶತಸಿದ್ಧ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.

ಡಿಸೆಂಬರ್ 5 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ವಾಟಾಳ್ ನಾಗರಾಜ್ ಅವರು ವಿವಿಧ ಸಂಘಟನೆಗಳ ಜೊತೆಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ  ಅವರು,  ಡಿಸೆಂಬರ್ 5  ರಂದು  ಕರ್ನಾಟಕ  ಬಂದ್  ಮಾಡುವುದು  ಖಚಿತ. ಇದನ್ನು ತಡೆಯಲು ಸಾಧ್ಯವಿಲ್ಲ. ಡಿಸೆಂಬರ್ 5 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ ಎಂದರು.

ದಲಿತಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಡಿಸೆಂಬರ್ 5 ಕರ್ನಾಟಕ ಬಂದ್‌ಗೆ ಬೆಂಬಲ ನೀಡಿದ್ದು, ಎಲ್ಲಾರು ಕರ್ನಾಟಕ ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

Related