ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿ ಇಲ್ಲ;ಅ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ: ಬೊಮ್ಮಾಯಿ

  • In State
  • January 20, 2024
  • 69 Views
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿ ಇಲ್ಲ;ಅ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ: ಬೊಮ್ಮಾಯಿ

ಹಾವೇರಿ: ರಾಜ್ಯದಲ್ಲಿ ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲೆ ಕೊಲೆ, ದೌರ್ಜನ್ಯ, ಅತ್ಯಾಚಾರ, ಗ್ಯಾಂಗ್ ರೇಪ್ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದ್ದರು ಕೂಡ ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ಯಾವುದೇ ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ. 

ಕರ್ನಾಟಕ ಕಾನೂನು ವ್ಯವಸ್ಥೆ  ರಾಜ್ಯದಲ್ಲಿ ಸರಿ ಇಲ್ಲ. ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಹಾನಗಲ್​​ನಲ್ಲಿ ಮಹಿಳೆ ಮೇಲೆ ಗ್ಯಾಂಗ್​ರೇಪ್​ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ. ಹಾನಗಲ್​​ನಲ್ಲಿ ಗ್ಯಾಂಗ್​ರೇಪ್ ಪ್ರಕರಣ ಬಹಿರಂಗಗೊಂಡಿದೆ. ನೈತಿಕ ಪೊಲೀಸ್​ಗಿರಿ ಪ್ರಕರಣಗಳೂ ಬಹಿರಂಗವಾಗಿವೆ. ಇಂತಹ ಕೃತ್ಯ ಎಸಗುವ ಗ್ಯಾಂಗ್​​ ಸಕ್ರಿಯವಾಗಿದೆ. ಕೃತ್ಯಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಪ್ರಕರಣವನ್ನು SIT ತನಿಖೆಗೆ ಕೊಡಿ ಅಂದ್ರೂ ಸರ್ಕಾರ ನೀಡ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದ್ದಾರೆ.

 

Related