ಕಚೇರಿಯಲ್ಲಿಯೇ ನೇಣಿಗೆ ಶರಣಾದ ಅಧಿಕಾರಿ

ಕಚೇರಿಯಲ್ಲಿಯೇ ನೇಣಿಗೆ ಶರಣಾದ ಅಧಿಕಾರಿ

ದಾವಣಗೆರೆ : ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ.

ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿಯೇ ಅಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಿರುವ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ಎಂ.ಬಿ ಶಿವಕುಮಾರ್ (46) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related