ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು

ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಕೃಷಿ ಮಸೂಧೆಗಳ ವಿರುದ್ಧ ರೈತರು ಇಂದು ಹೋರಾಟ ಆರಂಭಿಸಿದ್ದು, ದೆಹಲಿ ಚಲೋ ಆರಂಭಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರೈತರು ದೆಹಲಿ-ಹರಿಯಾಣ ಹೆದ್ದಾರಿಯಲ್ಲಿ ಜಮಾಯಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ದೆಹಲಿಯವರೆಗೆ ಪಾದಯಾತ್ರೆ ಕೈಗೊಳ್ಳಲಿದ್ದಾರೆ. ದೆಹಲಿ ಸಮೀಪ ಇರುವ ರಾಜ್ಯಗಳಾದ ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನದಿಂದ ರೈತರು ಟ್ರ‍್ಯಾಕ್ಟರ್ ಮೂಲಕ ಆಗಮಿಸಲಿದ್ದಾರೆ. ಇಂದಿನಿಂದ ದೆಹಲಿಯಲ್ಲಿ ಅನಿರ್ಧಿಷ್ಟಾವಧಿ ಧರಣಿ ನೀಡಲು ತೀರ್ಮಾನಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮ ದೆಹಲಿ-ಹರಿಯಾಣ ಹೆದ್ದಾರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ದೆಹಲಿ ರಾಜ್ಯದ ಗಡಿಯೊಳಗೆ ಒಳಬರದಂತೆ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.

Related