ರಾಷ್ಟ್ರಪತಿ ಭವನದಲ್ಲಿ ಮಹಿಳೆಗೆ ಕೊರೋನಾ ;

ರಾಷ್ಟ್ರಪತಿ ಭವನದಲ್ಲಿ ಮಹಿಳೆಗೆ ಕೊರೋನಾ ;

ನವದೆಹಲಿ,ಏ. 21 : ರಾಷ್ಟ್ರಪತಿ ಭವನದಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ರಾಷ್ಟ್ರಪತಿ ಭವನದ ಕಾಂಪ್ಲೆಕ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯ ಸಂಬಂಧಿ ಕೊರೋನಾದಿಂದ ಮೃತಪಟ್ಟಿದ್ದರು.
ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಮಹಿಳೆಗೂ ಸೋಂಕು ಇರುವುದು ಪತ್ತೆಯಾಗಿದೆ. ಹೀಗಾಗಿ ಎಲ್ಲಾ 125 ಸಿಬ್ಬಂದಿಗಳನ್ನೂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಅಷ್ಟೇ ಅಲ್ಲದೆ, ರಾಷ್ಟ್ರಪತಿ ಭವನದ ಕಾಂಪ್ಲೆಕ್ಸ್ ನಲ್ಲಿ ಕೆಲಸ ಮಾಡುವ ಎಲ್ಲಾ ಕಾರ್ಮಿಕರ ನಿವಾಸಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

Related