ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ 25 ರೂ. ಹೆಚ್ಚಳ

ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ 25 ರೂ. ಹೆಚ್ಚಳ

ನವದೆಹಲಿ: ತೈಲ ಕಂಪನಿ ದೇಶೀಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 25 ರೂ ಹೆಚ್ಚಳಮಾಡಿದೆ. ದೆಹಲಿಯಲ್ಲಿ 14.2 ಕೆಜಿ ಎಲ್ ಪಿಜಿ ಸಿಲೆಂಡರ್ ಬೆಲೆ ಈಗ 859 ರೂಪಾಯಿ 5 ಪೈಸೆಯಾಗಿದೆ. ಮಂಗಳವಾರದವರೆಗೆ 834 ರೂಪಾಯಿ 50 ಪೈಸೆಯಾಗಿತ್ತು. ಮುಂಬೈನಲ್ಲಿಯೂ ಸಹ 14.2 ಕೆಜಿ ಎಲ್ಪಿಜಿ ಸಿಲಿಂಡರ್ ದರ ಈಗ 859.5 ರೂ, ಮಂಗಳವಾರದವರೆಗೆ 834.50 ರೂ ಆಗಿತ್ತು. ಕೋಲ್ಕತ್ತಾದಲ್ಲಿ ಎಲ್ಪಿಜಿ ಸಿಲಿಂಡರ್ ದರ ಪ್ರತಿ ಸಿಲಿಂಡರ್ಗೆ ರೂ 861 ರಿಂದ ರೂ 886 ಕ್ಕೆ ಏರಿಕೆಯಾಗಿದೆ. ಚೆನ್ನೈನ ಎಲ್ಪಿಜಿ ಸಿಲಿಂಡರ್ಗಾಗಿ ಬುಧವಾರದಿಂದ 875.50 ರೂಗಳನ್ನು ಪಾವತಿಸಬೇಕಾಗುತ್ತದೆ, .

ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್ ಪಿಜಿ ಸಿಲೆಂಡರ್ ಬೆಲೆ 862 ರೂಪಾಯಿ 50 ಪೈಸೆಯಾಗಿದೆ. ಸಿಲಿಂಡರ್ ಬೆಲೆ ಹೆಚ್ಚಳವಾಗುತ್ತಿದ್ದಂತೆ ಎಂದಿನಂತೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದಾರೆ.

Related