ರಾತ್ರೋರಾತ್ರಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ

ರಾತ್ರೋರಾತ್ರಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ

ಬೆಳಗಾವಿ : ರಾಜ್ಯಾದ್ಯಂತ ಸದ್ದು ಮಾಡಿದ್ದ ಬೆಳಗಾವಿ-ಪೀರನವಾಡಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಕೊನೆಗೂ ತೆರೆ ಬಿದ್ದಿದೆ.

ಕಳೆದ ಮಧ್ಯರಾತ್ರಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೀರನವಾಡಿ ಗ್ರಾಮದಲ್ಲಿ ಈ ಹಿಂದೆ ಗುರುತಿಸಿದ್ದ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ಕ್ರಾಂತಿಯ ಕಹಳೆ ಊದಿದ್ದಾರೆ.

ನಿನ್ನೆ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹಿಸಿ ದೊಡ್ಡ ಹೋರಾಟವೇ ನಡೆದಿತ್ತು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಇದೇ ತಿಂಗಳ 29ರಂದು ಅಂತಿಮ ನಿರ್ಧಾರ ಕೈಗೊಳ್ಳುವ ಭರವಸೆ ನಿಡಿದ್ದರು.

ಹಲವಾರು ವರ್ಷಗಳಿಂದ ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್‌ನಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹೋರಾಟ ಮಾಡುತ್ತ ಬಂದಿದ್ದ ರಾಯಣ್ಣನ ಪರಮ ಭಕ್ತರಿಗೆ ಇದು ಜಯದ ಕ್ಷಣವಾಗಿದೆ. ಕರವೇ ಕಾರ್ಯಕರ್ತರು ಮೂರ್ತಿ ಪ್ರತಿಷ್ಠಾಪನೆ ಮಾಡಿ, ರಾಯಣ್ಣನ ಮೂರ್ತಿಗೆ ದೊಡ್ಡ ಹೂಮಾಲೆ ಹಾಕಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪರ ಘೋಷಣೆಗಳನ್ನು ಕೂಗುವ ಮೂಲಕ ರಾತ್ರಿ ವಿಜಯೋತ್ಸವ ಆಚರಿಸಿದ್ದಾರೆ.

Related