ಯುವತಿಗೆ ಗುಂಡೇಟು

ಯುವತಿಗೆ ಗುಂಡೇಟು

ಬೆಂಗಳೂರು, ಫೆ. 26 : ಪೇಯಿಂಗ್ ಗೆಸ್ಟ್ನಲ್ಲಿ ವಾಸಿಸುತ್ತಿದ್ದ ಯುವತಿ ಮೇಲೆ ಪರಿಚಿತ ವ್ಯಕ್ತಿ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ವೈಯಕ್ತಿಕ ವಿಚಾರಕ್ಕೆ ಗಲಾಟೆಯಾಗಿ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.
ಒಡಿಶಾ ಮೂಲದ ಶುಭಶ್ರೀ ಪ್ರಿಯದರ್ಶಿನಿ (25) ಗಾಯ ಗೊಂಡಾಕೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಕುರಿತು ಮಾರತ್ಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಆರೋಪಿಗಾಗಿ ಹುಡುಕಾಟ ನಡೆದಿದೆ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.

Related