ಬೆಂಗಳೂರು: ಭಾರತ ಸೇನೆಯು ಇಂದು ಪಾಕಿಸ್ತಾನದ ಉಗ್ರರನ್ನು ಎಡೆಮುರಿ ಕಟ್ಟಿದ್ದು, ಆಪರೇಷನ್ ಸಿಂದೂರ್ ಮೂಲಕ ಸುಮಾರು 80 ರಿಂದ 100 ಉಗ್ರರನ್ನು ಭಾರತೀಯ ಸೇನೆಯು ಉಗ್ರರನ್ನು ಹೊಡೆದುರುಲಿಸಿದೆ. ಇನ್ನು ಭಾರತ ಸೇನೆಯ ಸೇವೆಯನ್ನು ಹಣೆಗೆ ತಿಲಕ ಇಟ್ಟು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಂಡಾಡಿದ್ದಾರೆ.
ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯು ಆಪರೇಷನ್ ಸಿಂದೂರ್ ದ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದು ನಮಗೆ ಹೆಮ್ಮೆಯ ಸಂಗತಿ ಎಂದು ಭಾರತೀಯ ಸೇನಾ ಪಡೆಯನ್ನು ಕೊಂಡಾಡಿದ್ದಾರೆ.
ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಎಂದರು. ಇದನ್ನೂ ಓದಿ: ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನನ್ನ ಸೆಲ್ಯೂಟ್: ಸಿಎಂ
ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ.
ಕಾಶ್ಮೀರದ ಪಹಲ್ಗಾಂವ್ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದರು.