ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹುನ್ನಾರ ನಡಿಯುತ್ತಿದೆ: ಬಿಸಿ ನಾಗೇಶ್​

ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹುನ್ನಾರ ನಡಿಯುತ್ತಿದೆ: ಬಿಸಿ ನಾಗೇಶ್​

ಬೆಂಗಳೂರು: ರಾಜ್ಯದಲ್ಲಿ ಕಳೆದ ಬಿಜೆಪಿ ಸರ್ಕಾರದಲ್ಲಿ NEP ಶಿಕ್ಷಣ ನೀತಿ ಜಾರಿ ಮಾಡಲಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ NEP ಶಿಕ್ಷಣ ನೀತಿಯನ್ನು ಮುಂದಿನ ವರ್ಷದಿಂದ ರದ್ದು ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿಕೆ ನೀಡಿದೆ.

ಇನ್ನು NEP ಶಿಕ್ಷಣ ನೀತಿಯನ್ನು ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಕಾಂಗ್ರೆಸ್ ಸರ್ಕಾರ ಮುಚ್ಚಲು ದೊಡ್ಡ ಹುನ್ನಾರವನ್ನು ನಡೆಸುತ್ತಿದೆ ಎಂದು ಮಾಜಿ ಸಚಿವ ಬಿಸಿ ನಾಗರಾಜ್ ಕಾಂಗ್ರೆಸ್ ವಿರುದ್ಧ ಹರಿಹರದಿದ್ದಾರೆ.

ಬಹುತೇಕ ರಾಜಕಾರಣಿಗಳು, ಅಧಿಕಾರಿಗಳು ಶಾಲೆ ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿಸಬೇಕು ಅಂತ ಷಡ್ಯಂತ್ರ.

ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಸ್​​.ಎಸ್​.ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ್ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ದೊಡ್ಡ ಹುನ್ನಾರ ಮಾಡಿದೆ. ಸಿದ್ದರಾಮಯ್ಯ ಎನ್​ಇಪಿ ತೆಗೆದುಹಾಕುವ ಮೊದಲು ಜನರ ಮುಂದಿಡಲಿ ಅದರಲ್ಲಿ ಏನೆಲ್ಲ ಲೋಪದೋಷಗಳಿವೆ ಎಂದು ಬಹಿರಂಗಪಡಿಸಬೇಕು. ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿದು ಈ ರೀತಿ ನಡೆದುಕೊಳ್ಳಬಾರದು ಎಂದು ಹೇಳಿದರು.

Related