ಬಿಜೆಪಿ ನಾಯಕತ್ವದಲ್ಲಿ ಬದಲಾವಣೆಯಿಲ್ಲ!

ಬಿಜೆಪಿ ನಾಯಕತ್ವದಲ್ಲಿ ಬದಲಾವಣೆಯಿಲ್ಲ!

ಬೆಂಗಳೂರು : ಕೆಲ ದಿನಗಳಿಂದ ಜೋರಾಗಿ ಎದ್ದಿದ್ದ ನಾಯಕತ್ವ ಬದಲಾವಣೆ ಕೂಗಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಖುದ್ದು ತೆರೆ ಎಳೆದಿದ್ದಾರೆ.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆಯಿಲ್ಲ. ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ, ಹೀಗಾಗಿ ಅವರನ್ನು ಬದಲಾವಣೆ ಮಾಡುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ರಾಜ್ಯ ಬಿಜೆಪಿ ನಾಯಕರು ಈ ನಾಯಕತ್ವ ಬದಲಾವಣೆ ಸುದ್ದಿಗೆ ಸ್ಪಷ್ಟನೆ ನೀಡಿದ್ದರು, ಯಡಿಯೂರಪ್ಪ ತಮ್ಮ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದರು.

Related