ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ!

ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ!

ನವದೆಹಲಿ : ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಒಡಕು ಇದೆ ಎಂಬ ಮಾತು ಸತ್ಯಕ್ಕೆ ದೂರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ. ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ ಎಂದರು.

ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಎಲ್ಲರೂ ಬದ್ಧ. ಮಂಗಳವಾರ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.

Related