ಈ ಬಾರಿಯ ಉಪಚುನಾವಣೆಗಳಿಗೆ JDS ಸ್ಪರ್ಧೆ ಇಲ್ಲ

ಈ ಬಾರಿಯ ಉಪಚುನಾವಣೆಗಳಿಗೆ JDS ಸ್ಪರ್ಧೆ ಇಲ್ಲ

ರಾಯಚೂರು : ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಜೆಡಿಎಸ್ ಹೆಚ್.ಡಿ. ದೇವೇಗೌಡ ಸ್ಪಷ್ಟ ಪಡಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉಪಚುನಾವಣೆಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕುತ್ತಿಲ್ಲ. ನಮ್ಮ ಬಳಿ ಚುನಾವಣೆಗೆ ಹಣ ಇಲ್ಲ. ಬೆಳಗಾವಿ ಲೋಕಸಭೆ, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕುದಿಲ್ಲ ಎಂದು ಹೇಳಿದ್ದಾರೆ.

2023 ರಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಾಗಲಿದೆ. ಪಕ್ಷ ಕಟ್ಟುವುದಕ್ಕಾಗಿ ನಾನು ಸಂಪೂರ್ಣ ಭಾಗಿಯಾಗುತ್ತೇನೆ. ಕುಮಾರಸ್ವಾಮಿ ಸರ್ಕಾರ ಮುಗಿದ ಮೇಲೆ ನಾನ್ಯಾರಿಗೂ ನಿಂದನೆ ಮಾಡಿಲ್ಲ. ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದರು.

Related