ವಿದ್ಯುತ್ ಖಾಸಗೀಕರಣ ಇಲ್ಲ

ವಿದ್ಯುತ್ ಖಾಸಗೀಕರಣ ಇಲ್ಲ

ಬೆಂಗಳೂರು: ವಿದ್ಯುತ್ ವಲಯವನ್ನು ಖಾಸಗೀಕರಣಗೊಳಿಸುವುದಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಗುರುವಾರ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಇಂಡಿ ಸದಸ್ಯ ಯಶವಂತರಾಯಗೌಡ ವಿಠಲ ಗೌಡ ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಯೋಜನೆ ಇಲ್ಲ, ರೈತರು ಭಯಪಡುವ ಅಗತ್ಯವಿಲ್ಲ ಎಂದು ಸಚಿವರು ಭರವಸೆ ನೀಡಿದರು.
ನಗರಗಳಲ್ಲಿ ಇರುವ ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್‌ಗಳನ್ನು ತಾತ್ಕಾಲಿಕವಾಗಿ ಸ್ಥಾಪಿಸಲಾಗುವುದು ಎಂದು ಸಚಿವರು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಅಳವಡಿಸಲಾಗುವುದಿಲ್ಲ ಎಂದರು. ಸರ್ಕಾರಿ ಕಚೇರಿಗಳ ವಿದ್ಯುತ್ ಬಾಕಿ ರೂ. 5,792 ಕೋಟಿ. ಇದನ್ನು ತಡೆಯಲು, ಪ್ರಿಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸುವುದು ಅನಿವಾರ್ಯ ಎಂದು ನಿರ್ಧರಿಸಲಾಯಿತು. ಬೆಸ್ಕಾಂ ಒಂದು ಲಕ್ಷ ಮನೆಗಳಲ್ಲಿ ಪ್ರಿಪೇಯ್ಡ್ ಮೀಟರ್ ಅಳವಡಿಸಿದೆ. ಇದರ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು. ಹತ್ತು ಎಚ್‌ಪಿ ವರೆಗಿನ ಕಾಫಿ ತೋಟಗಳಿಗೆ ಉಚಿತ ವಿದ್ಯುತ್ ಪೂರೈಸಲು ವಿರಾಜಪೇಟೆ ಸದಸ್ಯ ಅಪ್ಪಚ್ಚು ರಂಜನ್ ಅವರ ಮನವಿಗೆ ಸುನೀಲ್ ಕುಮಾರ್ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

Related