ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ; ಹೆಚ್‌ಡಿಕೆ

ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ; ಹೆಚ್‌ಡಿಕೆ

ಬೆಂಗಳೂರು : ಕೆಆರ್‌ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಎಂದು ಹೇಳಿರುವ ಸುಮಲತಾ ಮಾಧ್ಯಮ ಹಾಗೂ ಅಧಿಕಾರಿಗಳ ತಂಡವನ್ನು ಕರೆದುಕೊಂಡು ಕೆಆರ್‌ಎಸ್‌ಗೆ ಹೋಗಿ ಪರಿಶೀಲನೆ ನಡೆಸಬೇಕು. ಅದನ್ನು ಬಿಟ್ಟು ಅಲ್ಲೆಲ್ಲೋ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ಹೋಗುತ್ತಿರುವುದೇಕೆ ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ವಾಕ್ಸಮರ ಮುಂದುವರೆಸಿ, ದುಡ್ದು ಹೊಡೆಯಲು ಹೋಗುತ್ತಿದ್ದಾರೆಯೇ? ಗಣಿಗಾರಿಕೆ ಪ್ರದೇಶಕ್ಕೆ ತೆರಳಿ ಪರಿಶೀಲನೆ ಹೆಸರಲ್ಲಿ ಹಣ ಪಡೆದುಕೊಳ್ಳುತ್ತಾರೆ ಅಷ್ಟೇ ಎಂದು ಗಂಭೀರ ಆರೋಪ ಮಾಡಿದರು.
ನಾನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಕ್ಷಮೆ ಕೇಳುವಂತಹ ಪದ ಬಳಕೆ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಳಿಕ ಪ್ರಜ್ವಲ್ ರೇವಣ್ಣನವರನ್ನು ನೋಡಿ ಕುಮಾರಸ್ವಾಮಿ ಕಲಿಯಲಿ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಹೆಸರು ಪ್ರಸ್ತಾಪಿಸಿ ನಮ್ಮ ಕುಟುಂಬದ ಒಗ್ಗಟ್ಟು ಒಡೆಯುವ ಹುನ್ನಾರ ಎಂದು ಆರೋಪಿಸಿದರು.

Related