ಆರೋಗ್ಯ ಸಿಬ್ಬಂದಿ ಅನಿಯಮಿತ ವರ್ಗಾವಣೆ ಇಲ್ಲ

ಆರೋಗ್ಯ ಸಿಬ್ಬಂದಿ ಅನಿಯಮಿತ ವರ್ಗಾವಣೆ ಇಲ್ಲ

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೌನ್ಸಿಲಿಂಗ್(ಸಮಾಲೋಚನೆ) ಕಡ್ಡಾಯಗೊಳಿಸುವುದರ ಮೂಲಕ ಕಟ್ಟುನಿಟ್ಟಿನ ಕ್ರಮವನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಬುಧವಾರ ಉನ್ನತಾಧಿಕಾರಿಗಳ ಸಭೆಯಲ್ಲಿ ಜಾರಿಗೊಳಿಸಿದರು.
‘ಸಿಬ್ಬಂದಿಯ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕಾಯ್ದೆ 2011 ರ ಅನ್ವಯ ಕೌನ್ಸಿಲಿಂಗ್ ಮೂಲಕ ಮಾತ್ರ ಕೈಗೊಳ್ಳಬೇಕು.  ನಿಯಮ ಉಲ್ಲಂಘಿಸಿ ವರ್ಗಾವಣೆ ಪ್ರಸ್ತಾವನೆಯನ್ನು ಶಿಫಾಸಿಗೆ ತಂದರೆ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈ ನಿರ್ಧಾರದ ಮೂಲಕ ಅನಿಯಮಿತ ವರ್ಗಾವಣೆ, ಭ್ರಷ್ಟಾಚಾರಕ್ಕೆ ತಡೆ ಬೀಳಲಿದ್ದು, ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಶಿಸ್ತು ಹಾಗೂ ಆರೋಗ್ಯ ಸೇವೆ ಒದಗಿಸುವಲ್ಲಿ ದಕ್ಷತೆ ಬರಲಿದೆ’ ಎಂದು ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.

Related