ವಿದ್ಯಾಗಮನ ಯೋಜನೆ ಪ್ರಯೋಜನವಿಲ್ಲ

ವಿದ್ಯಾಗಮನ ಯೋಜನೆ ಪ್ರಯೋಜನವಿಲ್ಲ

ದೇವದುರ್ಗ: ಕರೋನಾದಿಂದ ಜಿಲ್ಲೆಯ ಹಾಗೂ ರಾಜ್ಯದ ಸರ್ಕಾರಿ ಶಾಲೆಯ ಮಕ್ಕಳ ಶಿಕ್ಷಣ ಕುಂಠಿತವಾಗಿದೆ. ಬಡ ಮತ್ತು ಮಧ್ಯಮವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸರ್ಕಾರ ಜಾರಿಗೆ ತಂದ ವಿದ್ಯಾಗಮನ ಯೋಜನೆಯಿಂದ ಯಾವುದೇ ಪ್ರಯೋಜನಯಿಲ್ಲ, ಅದನ್ನು ನಾವು ಸ್ವಾಗತಿಸುವುದಿಲ್ಲ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಜಯಶ್ರೀ ಹೇಳಿದ್ದಾರೆ.

ಶುಕ್ರವಾರ ಪಟ್ಟಣದ ಡಾನ್ ಬಾಸ್ಕೋ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಮನ್ವಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ೧೮ ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಿ ಸರ್ಕಾರಿ ಶಾಲೆಗಳನ್ನು ತೆರೆಯಬೇಕೆಂದಿದ್ದಾರೆ.

ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲಿ ಆನ್‌ಲೈನ್ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಆನ್‌ಲೈನ್ ತರಗತಿಗಳು ನಡೆಯುತ್ತಿಲ್ಲ. ಇದು ಸರ್ಕಾರ ಬಡ ಮತ್ತು ಮದ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಮಾಡಿದಂತೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ವ್ಯಾಕ್ಸಿನ್ ನೀಡದೆ ಶಾಲೆಗಳನ್ನು ತೆರೆಯುವುದು ಮಕ್ಕಳ ಜೀವದ ಜೊತೆ ಆಟವಾಡಿದಂತೆ ಆಗುತ್ತದೆ. ಸರ್ಕಾರ ಶಾಲೆಗಳನ್ನು ತೆರೆಯುವ ಮುನ್ನ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಕ್ರಮಗಳನ್ನು ಅನುಸರಿಸಬೇಕೆಂದು ಸಲಹೆ ನೀಡಿದ್ದಾರೆ.

Related