ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಸದ್ಯಕ್ಕಿಲ್ಲ

ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಸದ್ಯಕ್ಕಿಲ್ಲ

ಬೆಂಗಳೂರು: 2022 23ನೇ ಸಾಲಿನಲ್ಲಿ ನವಂಬರ್ 5 ಕ್ಕೆ ಕಲ್ಯಾಣ ಕರ್ನಾಟಕ ಪೊಲೀಸ್ ಕಾನ್‌ಸ್ಟೆಬಲ್ (ಸಿವಿಲ್) 454 ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ನವಂಬರ್ 19ಕ್ಕೆ ನಡೆಸಲು ಸಿದ್ಧತೆ ನಡೆಸುವಂತೆ ಪೊಲೀಸ್ ನೇಮಕಾತಿ ವಿಭಾಗ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕರ್ನಾಟಕ ಪೊಲೀಸ್ 454 ಬ್ಯಾಕ್‌ಲಾಗ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ನವಂಬರ್ 5ಕ್ಕೆ ನಿಗದಿ ಪಡಿಸಲಾಗಿತ್ತು. ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು. ಈ ನಡುವೆ ಅಂದೇ ದಿನ ಕೆಪಿಎಸ್‌ಸಿ ಕೂಡ ವಿವಿಧ ಇಲಾಖೆಗಳ ನೇಮಕಾತಿ ಲಿಖಿತ ಪರೀಕ್ಷೆ ನಿಗದಿಪಡಿಸಿತ್ತು. ಈ ಸಂಬಂಧ ಅಭ್ಯರ್ಥಿಗಳಲ್ಲಿ ಅಸಮಾಧನವನ್ನು ಹುಟ್ಟುಹಾಕಿತ್ತು, ಈ ಬಗ್ಗೆ ಸಚಿವ ಪ್ರಿಯಾಂಕ ಖರ್ಗೆ ಕೂಡ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದರು.

ಈ ಹಿನ್ನೆಲೆಯಲ್ಲಿ ನ.14ಕ್ಕೆ ಲಿಖಿತ ಪರೀಕ್ಷೆಯನ್ನು ಮುಂದೂಡಿ ನೇಮಕಾತಿ ವಿಭಾಗದ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಆದೇಶ ಹೊರಡಿಸಿದ್ದರ ಸಂಬಂಧ ಪರೀಕ್ಷಾ ಅಭ್ಯರ್ಥಿಗಳು ನಿಟ್ಟುಸಿರು ಬಿಟ್ಟಂತಾಗಿದೆ.

ವರದಿಗಾರ, ಎ ಚಿದಾನಂದ.

Related