ನ್ಯಾಯಯಾತ್ರೆಗೆ ಉದ್ದೇಶ ಪೂರ್ವಕವಾಗಿಯೇ ಸಮಸ್ಯೆ ಉಂಟು ಮಾಡುತ್ತಿದ್ದಾರೆ: ಸಿಎಂ

ನ್ಯಾಯಯಾತ್ರೆಗೆ ಉದ್ದೇಶ ಪೂರ್ವಕವಾಗಿಯೇ ಸಮಸ್ಯೆ ಉಂಟು ಮಾಡುತ್ತಿದ್ದಾರೆ: ಸಿಎಂ

ಮೈಸೂರು: ಕಾಂಗ್ರೆಸ್ ಸರ್ಕಾರದ ನೇತೃತ್ವದ ಯಾತ್ರೆಗಳನ್ನು ಉದ್ದೇಶಪೂರ್ವಕವಾಗಿ ನಿಲ್ಲಿಸುವುದೇ ಬಿಜೆಪಿಯ ಕೆಲಸವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಅವರ ವಿರುದ್ಧ ಗುಡುಗಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶ ಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಪ್ರತಿ ನಾಗರಿಕನಿಗೂ ಪಾದಯಾತ್ರೆ ಕೈಗೊಳ್ಳಲು ಅಥವಾ ಯಾವುದೇ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ವಾತಂತ್ರ್ಯವನ್ನು ಸಂವಿಧಾನ ಕೊಟ್ಟಿದೆ. ರಾಹುಲ್ ಗಾಂಧಿಯವರು ದೇಶದ ಜನರ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

 

Related