ಇದು ಐತಿಹಾಸಿಕವಾದ ಚಳವಳಿ: ಸಿಎಂ

ಇದು ಐತಿಹಾಸಿಕವಾದ ಚಳವಳಿ: ಸಿಎಂ

ನವದೆಹಲಿ: ದೆಹಲಿಯಲ್ಲಿ ನಾವು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ರಾಜಕೀಯವಾಗಿ ಅಲ್ಲ. ಇದು ನಮ್ಮ ಕರ್ನಾಟಕ ರಾಜ್ಯದ ಜನತೆಯ ಹಿತಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಪ್ರತಿಭಟನೆಗೂ ಮುನ್ನ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ನಮ್ಮ ಕರ್ನಾಟಕ ರಾಜ್ಯಕ್ಕೆ ಮತ್ತು ಕರ್ನಾಟಕ ಜನತೆಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಹಾಗಾಗಿ ಈ ಅನ್ಯಾಯದ ವಿರುದ್ಧ ನಾವು ಇಂದು ಹೋರಾಟ ಮಾಡಲು ಮುಂದಾಗಿದ್ದೇವೆ ಎಂದರು.

ಇನ್ನು ಈ ಹೋರಾಟದಲ್ಲಿ ನಮ್ಮ ಎಲ್ಲ ಶಾಸಕರು, ಸಚಿವರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದು ರಾಜಕೀಯ ಹೋರಾಟ ಅಲ್ಲ, ಇದು ಕನ್ನಡಿಗರ ಹಿತ ಕಾಪಾಡುವ ಚಳವಳಿ ಎಂದರು,

ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ರಾಜ್ಯದ ಸಂಸದರಿಗೂ ಪತ್ರ ಬರೆದು ಮನವಿ ಮಾಡಿದೆ. ಇದು ಐತಿಹಾಸಿಕವಾದ ಚಳವಳಿ. ಸುಮಾರು ಶೇ 40-45 ರಷ್ಟು ತೆರಿಗೆ ಪಾಲು ನಮಗೆ ಬರಬೇಕು. ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. 100 ರೂ. ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ಅಷ್ಟೇ ನಮಗೆ ಬರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ರಾಜ್ಯಗಳಿಗೆ ಅನುದಾನ ನೀಡಬೇಕು. 14ನೇ ಹಣಕಾಸು ಆಯೋಗದ ನಿಯಮಾನುಸಾರ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದ ನಿಯಮಾನುಸಾರ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು ಎಂದು ಸಿಎಂ ಆಗ್ರಹಿಸಿದರು.

 

Related