ಈ ಕೊಲೆ ಪ್ರಕರಣ ಬಹಳ ಅನ್ಯಾಯ – ಡಿಕೆಶಿ

ಈ ಕೊಲೆ ಪ್ರಕರಣ ಬಹಳ ಅನ್ಯಾಯ – ಡಿಕೆಶಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್ ಕೊಲೆ ಪ್ರಕರಣ ಬಹಳ ಅನ್ಯಾಯ. ನಾವು ಇದನ್ನು ಖಂಡಿಸುತ್ತೇವೆ. ರಾಜ್ಯದಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲ. ಸರ್ಕಾರವೇ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡಿದೆ. ಆ ಮೂಲಕ ಪರಿಸ್ಥಿತಿ ಹದಗೆಡಲು ಕಾರಣವಾಗಿದೆ. ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ.

ನಮಗೆ ಇದರಲ್ಲಿ ರಾಜಕಾರಣ ಬೇಕಿಲ್ಲ. ನಾವು ಸರ್ಕಾರದ ಕ್ರಮಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನು ತನ್ನ ಕೆಲಸ ಮಾಡಲಿ. ಆದರೆ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು. ನಾವು ಜನರ ಭಾವನೆಗೆ ಗೌರವ ನೀಡುತ್ತೇವೆ. ಜನರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ.

ಜನರ ಆಕ್ರೋಶ ಮೊದಲಿನಿಂದಲೇ ಇತ್ತು. ಆದರೆ ಸರ್ಕಾರ ಆರಂಭದಿಂದಲೇ ಪರಿಸ್ಥಿತಿ ನಿಯಂತ್ರಣ ಮಾಡಿದ್ದರೆ ಈ ದುಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ.
ಎಲ್ಲರೂ ತಮ್ಮ, ತಮ್ಮ ಧರ್ಮ ರಕ್ಷಣೆ ಮಾಡಿಕೊಳ್ಳುತ್ತಾರೆ. ಪೊಲೀಸರು ಸ್ವಾತಂತ್ರ್ಯವಾಗಿ ತನಿಖೆ ಮಾಡಲು ಬಿಡಿ. ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪ್ರಕರಣ ದಾರಿ ತಪ್ಪಿಸಬಾರದು.

Related