ಈ ಬಾರಿ ಧಾರವಾಡ ಲೋಕಸಭಾ ಅಭ್ಯರ್ಥಿ ನಾನೇ: ಜೋಶಿ

ಈ ಬಾರಿ ಧಾರವಾಡ ಲೋಕಸಭಾ ಅಭ್ಯರ್ಥಿ ನಾನೇ: ಜೋಶಿ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಮರು ಸೇರ್ಪಡೆಯಾಗಿರುವುದರಿಂದ ಬಿಜೆಪಿ ಪಕ್ಷದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಉಂಟಾಗಿದೆ ಹಾಗಾಗಿ, ಬಿಜೆಪಿಯ ಸಂಸದ ಪ್ರಹ್ಲಾದ್ ಜೋಶಿಯವರು ಈ ಬಾರಿ ಧಾರವಾಡ ಲೋಕಸಭಾ ಚುನಾವಣೆಯ ಅಭ್ಯರ್ಥಿ ನಾನೇ ಎಂದು ಘೋಷಿಸುವ ಮೂಲಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ನಾನು ಈಗಾಗಲೇ ಚುನಾವಣೆಗೆ ತಯಾರಿ ನಡಸಿದ್ದೇನೆ. ಜೋಶಿನೇ ಅಭ್ಯರ್ಥಿ ಮತ್ತೆ ಇನ್ನೇನು ಎಂದರು.

ಹೌದು, ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಯಾಗಿರುವುದರಿಂದ ಬಿಜೆಪಿ ಬಣದಲ್ಲಿ ಮತ್ತೆ ಬಿರುಕುಂಟಂತಾಗಿದೆ.

ಹಾಗಾದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರಕ್ಕೆ ಯಾರಿಗೆ ಒಲಿದು ಬರಲಿದೆ, ಬಿಜೆಪಿ ಟಿಕೆಟ್ ಕಾದು ನೋಡಬೇಕಿದೆ.

Related