ಈ ಬಾರಿ 2 ಸೀಟು ನಾವೇ ಗೆಲ್ತೀವಿ: ಅಶೋಕ್‌

ಈ ಬಾರಿ 2 ಸೀಟು ನಾವೇ ಗೆಲ್ತೀವಿ: ಅಶೋಕ್‌

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಇಂದು ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯಾಗಳು ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ನಾರಾಯಣ ಬಾಂಡಗೆ ಮತ್ತು ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ವಿಧಾನಸೌಧದ ಕೊಠಡಿ ಸಂಖ್ಯೆ 121ರಲ್ಲಿ ವಿಧಾನಸಭೆಯ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

ನಾಮಪತ್ರ ಸಲ್ಲಿಸಿದ ಬಳಿಕ ಆರ್ ಅಶೋಕ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಈ ಬಾರಿ ರಾಜ್ಯಸಭಾ ಚುನಾವಣೆಯಲ್ಲಿ ಎರಡು ಸೀಟುಗಳನ್ನು ನಾವೇ ಪಡೆಯುತ್ತೇವೆ ಎಂದು ಬಹಳ ಉತ್ಸಾಹದಿಂದ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಜೆಡಿಎಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್, ಇಬ್ಬರೂ ಅಭ್ಯರ್ಥಿಗಳು ಉಪಸ್ಥಿತರಿದ್ದರು.

Related