ಸಿಎಂ ತವರು ಜಿಲ್ಲೆಯಲ್ಲಿಯೇ ಸಾವಿರಾರು ಕೋಟಿ ಅಕ್ರಮ: ಸಿಟಿ ರವಿ

ಸಿಎಂ ತವರು ಜಿಲ್ಲೆಯಲ್ಲಿಯೇ ಸಾವಿರಾರು ಕೋಟಿ ಅಕ್ರಮ: ಸಿಟಿ ರವಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದಲ್ಲ ಒಂದು ಹಗರಣ ನಡೆಯುತ್ತಲೇ ಇದೆ. ಇದರಿಂದ ವಿರೋಧ ಪಕ್ಷದ ನಾಯಕರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಕೈಗೊಳ್ಳುತ್ತಿದ್ದಾರೆ.

ಅದಲ್ಲದೆ ಇಂದು ಬಿಜೆಪಿಯ ಎಂಎಲ್ಸಿ ಸಿಟಿ ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬಟ್ಟೆ ಮಾತ್ರ ಪರಿಶುದ್ಧವಾಗಿದ್ದರೆ ಸಾಕಾಗದು ಆಡಳಿತವೂ ಕೂಡಾ ಶುದ್ಧವಾಗಿರಬೇಕು ಎಂದರು. ಭೂಮಿ ವಶಪಡಿಸಿಕೊಳ್ಳಬೆಕಾದರೆ 50:50 ನಿವೇಶನ ಕೊಡಬೇಕಾಗುತ್ತದೆ. ಸರ್ಕಾರಕ್ಕೆ ಮೋಸ ಮಾಡಬೇಕೆಂದೇ ವ್ಯವಸ್ಥಿತವಾಗಿ ಮಾಡಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಭಾರತಕ್ಕೆ ಮರಳಿದ ಟೀಮ್ ಇಂಡಿಯಾ ಆಟಗಾರರು; ಎಲ್ಲೆಡೆ ಸಂಭ್ರಮಾಚರಣೆ

ಸಿಎಂ ತವರು ಜಿಲ್ಲೆಯಲ್ಲಿಯೇ ಸಾವಿರಾರು ಕೋಟಿ ಅಕ್ರಮ ಆಗಿದೆ. ಸಿಎಂ ಸಿದ್ದರಾಮಯ್ಯನವರು ತಮ್ಮ ಪರಿಶುದ್ಧತೆಯನ್ನು ಸಾಬೀತುಪಡಿಸಲು ರಾಜೀನಾಮೆ ಕೊಡಬೇಕು ಎಂದ ಸಿಟಿ ರವಿ, ದಾಖಲೆ‌ ಇಟ್ಟು ಭ್ರಷ್ಟಾಚಾರ ಜನರ ಮುಂದೆ ಬಯಲಿಗೆಳೆಯುತ್ತೇವೆ ಎಂದರು.

Related