ಕಾಂಗ್ರೆಸ್ ಪಕ್ಷಕ್ಕೆ ಮೂರು ಬಾಗಿಲು

ಕಾಂಗ್ರೆಸ್ ಪಕ್ಷಕ್ಕೆ ಮೂರು ಬಾಗಿಲು

ಚಿತ್ರದುರ್ಗ : ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೀಗೆ ಕಾಂಗ್ರೆಸ್ ಪಕ್ಷ ಮೂರು ಭಾಗಗಳಾಗಿ ಒಡೆದಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೂವರು ಕಾಂಗ್ರೆಸ್ ನಾಯಕರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ.
ಸಿಎಂ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪ ಬದಲಾವಣೆ ಬಗ್ಗೆ ಅವರು ಮಾತಾಡ್ತಾರೆ, ಮೊದಲು ಮೂರು ಬಾಗಿಲಾಗಿರುವ ಕಾಂಗ್ರೆಸ್ ವನ್ನು ಸರಿಪಡಿಸಿಕೊಳ್ಳಲಿ ಎಂದು ಟಾಂಗ್ ನೀಡಿದರು.

ಸಿದ್ದರಾಮಯ್ಯನವರ ಷಡ್ಯಂತ್ರದಿAದ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರದಿಂದ ಕೆಳಗಿಳಿಯಬೇಕಾಯಿತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಸಿದ್ದರಾಮಯ್ಯ ಅವರು ಗೋಮಾಂಸ ಭಕ್ಷಣೆ, ಕ್ರಾಸ್ ಬೀಡ್, ರಾಮ-ಆಂಜನೇಯ ಬಗ್ಗೆ ಹೇಳಿಕೆ ನೀಡಿದ ಬಳಿಕ ವಿಷಾದ ವ್ಯಕ್ತಪಡಿಸಿ ವಾಪಸ್ ಪಡೆಯುತ್ತೇನೆ ಎಂದರು. ಅಧಿಕಾರ ಕಳೆದುಕೊಂಡು ಸಿದ್ದರಾಮಯ್ಯಗೆ ಮತಿ ಭ್ರಮಣೆಯಾಗಿದೆ ಎಂದು ಸಚಿವ ಶ್ರೀರಾಮುಲು ಕಿಡಿಕಾರಿದರು.

ಬುಧವಾರ ಏಳು ಜನ ಶಾಸಕರಿಗೆ ಮಂತ್ರಿಗಿರಿ ಸಿಗಲಿದೆ, ಇಂಥವರೇ ಮಂತ್ರಿ ಆಗ್ತಾರೆಂದು ನಾನು ಹೇಳಲಾಗದು ಎಂದು ಚಿತ್ರದುರ್ಗದಲ್ಲಿ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದರು.

Related