ಸಿದ್ದು ಕಾರಿಗೆ ಮೊಟ್ಟೆ ಎಸೆತ

ಸಿದ್ದು ಕಾರಿಗೆ ಮೊಟ್ಟೆ ಎಸೆತ

ಕೊಡಗು: ಇಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನೆರೆಪೀಡಿತ ಪ್ರದೇಶಗಳ ಪರಿಶೀಲನೆಗೆ ಕೊಡಗು ಜಿಲ್ಲೆಗೆ ಆಗಮಿಸಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ತಿತಿಮತಿಯಲ್ಲಿ ನೆರೆ ವೀಕ್ಷಣೆ ಮುಗಿಸಿ ಬಳಿಕ ಮಡಿಕೇರಿ ಕಡೆಗೆ ಸಿದ್ದರಾಮಯ್ಯ ಆಗಮಿಸುತ್ತಿದ್ದರು. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಆಗಮಿಸಿದಾಗ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದಿದ್ದಾರೆ.

ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಿದ್ದರಾಮಯ್ಯನವರಿಗೆ ಘೇರಾವ್ ಹಾಕಿ ಧಿಕ್ಕಾರ ಕೂಗಿದರು. ಕಪ್ಪು ಪಟ್ಟಿಆಕ್ರೋಶ ಹೊರಹಾಕಿದರು.

 

Related