ಡ್ರಗ್ ಮಾಫಿಯಾ ಮಟ್ಟ ಹಾಕಲು ಬಿಗಿ ಕಾನೂನು

ಡ್ರಗ್ ಮಾಫಿಯಾ ಮಟ್ಟ ಹಾಕಲು ಬಿಗಿ ಕಾನೂನು

ಬೆಂಗಳೂರು : ರಾಜ್ಯ ಸರ್ಕಾರ ಡ್ರಗ್ಸ್ ಮಾಫಿಯಾ ವಿರುದ್ಧಕ್ಕೆ ಮುಂದಾಗಿದೆ. ಈಗಾಗಲೇ ಪ್ರಭಾವಿಗಳ ಬಂಧನ ಆಗಿದ್ದು, ಇನ್ನು ಹಲವು ಪ್ರಭಾವಿಗಳ ಹೆಸರು ಕೇಳಿ ಬರುತ್ತಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಹತ್ವದ ಮಾಹಿತಿ ನೀಡಿದರು.

ಕಾನೂನು ಕ್ರಮದಲ್ಲಿ ಸಚಿವರ ಜೊತೆಗೆ ಚರ್ಚೆ ಮಾಡುತ್ತೇನೆ. ನಮ್ಮ ಸಿಸಿಬಿ ಪೊಲೀಸರು ವೃತ್ತಿಪರವಾಗಿ ಕ್ಮಬದ್ಧವಾಗಿ ತನಿಖೆ ಮಾಡುತ್ತಿದ್ದಾರೆ. ತನಿಖೆಗೆ ಜಾಡು ಹಿಡಿದು ಎಷ್ಟೆ ದೊಡ್ಡವರಿರಲಿ ವಿಚಾರಣೆಗೆ ಒಳಪಡಿಸುವುದು ಸಿದ್ಧ. ಕಾನೂನು ಅನ್ವಯವೇ ಕಾರ್ಯಾಚರಣೆ ನಡೆಯುತ್ತಿದೆ.

ಸಾಕ್ಷಿಗಳನ್ನು ಆಧಾರ ಮೇಲೆ ಕ್ರಮ ಬದ್ಧವಾಗಿ ತನಿಖೆ ನಡೆಸುತ್ತಿದ್ದಾರೆ. ಆದರೂ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲು ಅನುಕೂಲ ಮಾಡಿಕೊಡಿ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಕಾನೂನು ಶಾಲೆ ಪ್ರಾಧ್ಯಾಪಕರೊಂದಿಗೆ ಚರ್ಚೆ ಮಾಡಿದ್ದೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ಆರ್‌ಟಿ ನಗರದಲ್ಲಿ ಹೇಳಿಕೆ ಕೊಟ್ಟಿದ್ದಾರೆ.

Related