ಬೆಂಗಳೂರು: ಪಾಕಿಸ್ತಾನಿ ಉಗ್ರರ ಹುಟ್ಟಡಗಿಸಲು ಆಪರೇಷನ್ ಸಿಂಧೂರ್ ಮೂಲಕ ಭಾರತ ಸೈನಿಕರು ಪಾಕಿಸ್ತಾನಿ ಉಗ್ರರನ್ನು ಹೆಡೆಮುರಿ ಕಟ್ಟುತ್ತಿರುವ ಸೈನಿಕರನ್ನು ಬೆಂಬಲಿಸಿ ಕರ್ನಾಟಕದ ಕಾಂಗ್ರೆಸ್ ಪಕ್ಷವು ಇಂದು ತಿರಂಗಾ ಯಾತ್ರೆಯನ್ನು ಕೈಗೊಂಡಿದೆ.
ಹೌದು, ಪಹಲ್ಗಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು. ಇದನ್ನೂ ಓದಿ: ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದೆ: ಸಿಎಂ
ಈ ಯಾತ್ರೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಪರಮೇಶ್ವರ್, ಕೆ ಎಚ್ ಮುನಿಯಪ್ಪ, ಮಹದೇವಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಡಾ ಎಂ ಸಿ ಸುಧಾಕರ್, ಬೋಸರಾಜು, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕಾರದ ರಿಜ್ವಾನ್ ಆರ್ಶದ್ ಮತ್ತಿತರರು ಭಾಗವಹಿಸಿದ್ದರು. ಸರಕಾರಿ, ಖಾಸಗಿ ಉದ್ದಿಮೆಗಳ ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾವಿರಾರು ವಿದ್ಯಾರ್ಥಿಗಳು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು.