ಮಲೆಮಹದೇಶ್ವರ ಬೆಟ್ಟಕ್ಕೆ : ಸಿಎಂ ಭೇಟಿ

ಮಲೆಮಹದೇಶ್ವರ ಬೆಟ್ಟಕ್ಕೆ : ಸಿಎಂ ಭೇಟಿ

ಚಾಮರಾಜನಗರ : ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಚಾಮರಾಜನಗರ ಪ್ರವಾಸ ಕೈಗೊಂಡಿದ್ದು, ಮಲೆ ಮಾದಪ್ಪನ ದರ್ಶನ ಪಡೆಯಲಿದ್ದಾರೆ.

ಇಂದು ಸಂಜೆ 5 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮಲೆ ಮಾದೇಶ್ವರನ ಬೆಟ್ಟಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಆಗಮಿಸಲಿದ್ದು, 5.30ಕ್ಕೆ ಅಧಿಕಾರಿಗಳೊಂದಿಗೆ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಬೆಟ್ಟದಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಸಿಎಂ ಬಿ.ಎಸ್ ಯಡಿಯೂರಪ್ಪಗೆ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸುರೇಶ್ ಕುಮಾರ್ ಸೇರಿದಂತೆ ಸ್ಥಳೀಯ ಶಾಸಕರು ಸಾಥ್ ನೀಡಲಿದ್ದಾರೆ.

Related