ಕೊರೊನಾಕ್ಕೆ ಚೀನಿಯರು ಬಲಿ

ಕೊರೊನಾಕ್ಕೆ ಚೀನಿಯರು ಬಲಿ

ಬಿಜಿಂಗ್, ಫೆ. 19 : ಚೀನಾದಲ್ಲಿ ತೀವ್ರ ತಲ್ಲಣ ಸೃಷ್ಠಿಸಿರುವ ಕೊರೊನಾದಿಂದ (ಕೋವಿದ್19) ಮೃತಪಟ್ಟವರ ಸಂಖ್ಯೆ 2000 ಗಡಿ ದಾಟಿದೆ. 78,185 ಜನರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಚೀನಾ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.
138 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಲಾಗಿದೆ. ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವುನೋವಿನ ಸಂಖ್ಯೆಗಳು ಹೆಚ್ಚಾಗುವ ಸಂಭವವಿದೆ ಎಂದು ಚೀನಾ ಸರ್ಕಾರದ ರಾಷ್ಟ್ರೀಯ ಆರೋಗ್ಯ ಸಮಿತಿ ಹೇಳಿದೆ.

Related