ಮಕ್ಕಳಿಂದ ಶೌಚಾಲಯ ಸ್ವಚ್ಚತೆ: ಪರಮೇಶ್ವರ್‌ ಹೇಳಿದ್ದೇನು?

ಮಕ್ಕಳಿಂದ ಶೌಚಾಲಯ ಸ್ವಚ್ಚತೆ: ಪರಮೇಶ್ವರ್‌ ಹೇಳಿದ್ದೇನು?

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಗಮನಕ್ಕೆ ನಾನು ಇದರ ಬಗ್ಗೆ ಮಾಹಿತಿ ನೀಡುತ್ತೇನೆ. ಜನರಲ್ ಸರ್ಕ್ಯುಲರ್ ಬಿಡುಗಡೆ ಮಾಡಿ ಇಡೀ ರಾಜ್ಯದಲ್ಲಿ ಮತ್ತೆ ಈ ರೀತಿ ಕ್ರಮ ನಡೆದಂತೆ ನೋಡಿಕೊಳ್ಳುತ್ತೇವೆ ಎಂದರು.

ಮಕ್ಕಳನ್ನು ಶಾಲಾ ಕೆಲಸಗಳಿಗೆ ಅದರಲ್ಲೂ ಇಂತಹ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಮಹಾ ಅಪರಾಧವೆಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ.

ಇನ್ನು ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ನಾನು ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಶಿಕ್ಷಣ ಸಚಿವರಿಗೆ ಮಾಹಿತಿ ನೀಡುತ್ತೇನೆಂದು ಈ ಸಂದರ್ಭದಲ್ಲಿ ಹೇಳಿದರು.

 

Related