ಜಾಗತಿಕ ಮಟ್ಟದಲ್ಲಿ ದುರಂತ: ಕೋಡಿಮಠ ಶ್ರೀ

  • In State
  • July 1, 2023
  • 226 Views
ಜಾಗತಿಕ ಮಟ್ಟದಲ್ಲಿ ದುರಂತ: ಕೋಡಿಮಠ ಶ್ರೀ

ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಹುಬ್ಬಳ್ಳಿಯ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಯವರು ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದ ಅವರು, ಇದೀಗ ಅವರ ಭವಿಷ್ಯ ನಿಜವಾಗಿದೆ.

ಇದೀಗ ಶಿವಯೋಗಿ ಸ್ವಾಮೀಜಿಯವರು ಸ್ಫೋಟಕ ಭವಿಷ್ಯವೊಂದನ್ನು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಮೂರು ಗಂಡಾಂತರಗಳು ನಡೆಯಲಿವೆ. ಒಂದೆರಡು ರಾಷ್ಟಗಳು ಮುಚ್ಚಿ ಹೋಗಲಿವೆ ಎಂದು ಶ್ರೀಗಳು ಹೇಳಿದ್ದಾರೆ. ಜನರ ಅಕಾಲಿಕ ಮೃತ್ಯು ಆಗುವ ಸೂಚನೆ ಇದೆ. ವಿಜಯದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆಗಳು ನಡೆಯಲಿವೆ. ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕೋಡಿಮಠ ಶ್ರೀ ಹೇಳಿದ್ದಾರೆ.

ಶ್ರೀಗಳು ಈ ಹಿಂದೆ ನುಡಿದಿರುವಂತಹ ಹಲವಾರು ಮಾತುಗಳು ನಿಜ ಆಗಿದೆ. ಆದ್ದರಿಂದ ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಇನ್ನೇನಾಗುತ್ತೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

 

Related