ಟ್ರಂಪ್ ಭೇಟಿಗೆ ಭರ್ಜರಿ ರೆಡಿ

ಟ್ರಂಪ್ ಭೇಟಿಗೆ ಭರ್ಜರಿ ರೆಡಿ

ನವದೆಹಲಿ, ಫೆ. 24 : ಡೊನಾಲ್ಡ್ ಟ್ರಂಪ್ 36 ಗಂಟೆಗಳ ಐತಿಹಾಸಿಕ ಭಾರತ ಪ್ರವಾಸ ಕೈಗೊಂಡಿದ್ದಾರೆ. ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 36 ಗಂಟೆಗಳ ಐತಿಹಾಸಿಕ ಭಾರತ ಪ್ರವಾಸ ಕೈಗೊಂಡಿದ್ದು, ಭೇಟಿ ಎರಡೂ ದೇಶಗಳಲ್ಲಿ ಭಾರೀ ಕುತೂಹಲ ಕೆರಳಿಸಿದ್ದು, ಟ್ರಂಪ್ ಸ್ವಾಗತಿಸಲು ಮೋದಿ ಎಲ್ಲ ರೀತಿಯ ಸಿದ್ಧತೆ ನಡೆಸಿದ್ದಾರೆ. ಟ್ರಂಪ್ ಗಾಂಧಿ ನಾಡಿಗೆ ಆಗಮಿಸಲಿದ್ದಾರೆ.

ಇಂದು ಬೆಳಗ್ಗೆ 11.40ಕ್ಕೆ ಮೋದಿ ತವರು ರಾಜ್ಯ ಗುಜರಾತ್ನ ಅಹಮದಾಬಾದ್ನಲ್ಲಿರುವ ಸರ್ದಾರ್ ವಲ್ಲಭಾಯ್ ಪಟೇಲ್ ವಿಮಾನ ನಿಲ್ದಾಣದಲ್ಲಿ ಅಮೆರಿಕ ಅಧ್ಯಕ್ಷರ ಏರ್ಫೋರ್ಸ್ ಒನ್ ವಿಮಾನ ಬಂದಿಳಿಯಲಿದೆ. ಪತ್ನಿ ಮೆಲಾನಿಯಾ, ಪುತ್ರಿ ಇವಾಂಕಾ ಮತ್ತು ಅಳಿಯ ಜ್ಯಾರೆಡ್ ಕುಶ್ನರ್ , ಉನ್ನತ ಮಟ್ಟದ ರಾಜತಾಂತ್ರಿಕ ಯೋಗದೊಂದಿಗೆ ಆಗಮಿಸುತ್ತಿರುವ ಟ್ರಂಪ್ ಅವರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಬರಮಾಡಿಕೊಳ್ಳಲಿದ್ದಾರೆ.

`ನಮಸ್ತೆ ಟ್ರಂಪ್’ ಕಾರ್ಯಕ್ರಮ
ರೋಡ್ ಶೋ ಬಳಿಕ ವಿಶ್ವದಲ್ಲೇ ಅತೀ ದೊಡ್ಡದಾಗಿರುವ ಮೊಟೆರಾ ಸ್ಟೇಡಿಯಂನ್ನು ಟ್ರಂಪ್ ಉದ್ಘಾಟಿಸಲಿದ್ದಾರೆ. ತರುವಾಯ 1 ಲಕ್ಷ ಜನ ಸಾಕ್ಷಿ ಆಗಲಿರುವ ‘ನಮಸ್ತೆ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ. ಇದಕ್ಕಾಗಿ ಮೊಟೆರಾ ಸರ್ವಾಂಗ ಸುಂದರವಾಗಿ ಸಜ್ಜಾಗಿದೆ. ಈ ಹಿಂದೆ ಅಮೆರಿಕಾ ಪ್ರವಾಸ ಕೈಗೊಂಡಿದ್ದ ಮೋದಿಗಾಗಿ ‘ಹೌಡಿ ಮೋದಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಇದೀಗ ನಮಸ್ತೆ ಟ್ರಂಪ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರೇಮಿಗಳ ಸೌಧಕ್ಕೆ ಟ್ರಂಪ್ ಜೋಡಿ
ಸಂಜೆ ಪ್ರೇಮಿಗಳ ಸೌಧ ತಾಜ್ಮಹಲ್ಗೆ ಪತ್ನಿ ಮೆಲಾನಿಯಾ ಜೊತೆಗೆ ಡೊನಾಲ್ಡ್ ಟ್ರಂಪ್ ಭೇಟಿ ನೀಡಲಿದ್ದಾರೆ. ಒಂದೂವರೆ ಗಂಟೆಗಳ ಕಾಲ ತಾಜ್ಮಹಲ್ನಲ್ಲಿ ವಿಹಾರ ನಡೆಸಲಿರುವ ಟ್ರಂಪ್ ಜೋಡಿ ಬಳಿಕ ರಾಜಧಾನಿ ದೆಹಲಿಗೆ ಪ್ರಯಾಣಿಸಲಿದೆ. ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ಗೆ ಸಾಂಪ್ರದಾಯಿಕ ಅದ್ಧೂರಿ ಸ್ವಾಗತ ಕೋರಲಾಗುತ್ತದೆ. ಬಳಿಕ ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಲಿದ್ದಾರೆ.

Related