ಅಪ್ರಚೋದಿತ ಶೆಲ್ ದಾಳಿ: ಪಾಕ್ ಯೋಧರ ಹತ್ಯೆ

ಅಪ್ರಚೋದಿತ ಶೆಲ್ ದಾಳಿ: ಪಾಕ್ ಯೋಧರ ಹತ್ಯೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿಯ ಗಡಿ ನಿಯಂಂತ್ರಣ ರೇಖೆ ಬಳಿ ಭಾರತೀಯ ಸೇನಾಪಡೆ ಇಬ್ಬರು ಪಾಕ್ ಯೋಧರನ್ನು ಹತ್ಯೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕಳೆದ ರಾತ್ರಿ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಅಪ್ರಚೋದಿತ ಶೆಲ್ ದಾಳಿ ನಡೆಸಿತ್ತು. ದಾಳಿಗೆ ತಕ್ಕ ಉತ್ತರ ನೀಡಿ ಇಬ್ಬರು ಪಾಕಿಸ್ತಾನ ಸೇನೆಯ ಯೋಧರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾಪಡೆ ಮಾಹಿತಿ ನೀಡಿದೆ.

ಡಿಸೆಂಬರ್ 13 ರಂದೂ ಕೂಡ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ದಾಳಿ ನಡೆಸಿತ್ತು. ಈ ವೇಳೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿತ್ತು ಎಂದು ಲೆಫ್ಟಿನೆಂಟ್ ಜನರಲ್ ಸತೀಂದರ್ ಕುಮಾರ್ ಸೈನಿಯವರು ಹೇಳಿದ್ದಾರೆ.

Related