ಸಿಲಿಕಾನ್ ಗೆ ಉದ್ಯಾನ್ ಎಕ್ಸ್ ಪ್ರೆಸ್ ಎಂಟ್ರಿ

ಸಿಲಿಕಾನ್ ಗೆ ಉದ್ಯಾನ್ ಎಕ್ಸ್ ಪ್ರೆಸ್ ಎಂಟ್ರಿ

ಬೆಂಗಳೂರು : ಮುಂಬೈನಿಂದ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಉದ್ಯಾನ್ ಎಕ್ಸ್ ಪ್ರೆಸ್ ಆಗಮಿಸಿದೆ.ರೈಲಿನಲ್ಲಿ 1,200 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದು, ಕೊರೊನಾ ಭೀತಿ ಹಿನ್ನಲೆ ಅವರ ಮೇಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರೈಲಿನಲ್ಲಿ ಬಂದ ಎಲ್ಲ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.  ಲಗೇಜ್ ಗಳಿಗೆ ಔಷಧ ಸಿಂಪಡಿಸಲಾಗುತ್ತಿದೆ. ಆರೋಗ್ಯ ತಪಾಸಣೆ ಬಳಿಕ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಲಾಗುವುದು ಎನ್ನಲಾಗಿದೆ.

 

Related