ಸಚಿವ ಉಮೇಶ್ ಕತ್ತಿ ನಿಧನ

ಸಚಿವ ಉಮೇಶ್ ಕತ್ತಿ ನಿಧನ

ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ರಾತ್ರಿ ಅವರನ್ನು ನಗರದ ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಆಗಿತ್ತು. ಎಂ.ಎಸ್‌.ರಾಮಯ್ಯ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅರಣ್ಯ ಇಲಾಖೆ ಹಾಗೂ ವಿಜಯಪುರ ಉಸ್ತುವಾರಿ ಸಚಿವರಾಗಿ ಉಮೇಶ್ ಕತ್ತಿಹೊಣೆ ನಿರ್ವಹಿಸುತ್ತಿದ್ದಾರೆ.

Related