ಬಂಡ ಮುಖ್ಯಮಂತ್ರಿಗಳು ರಾಜ್ಯ ಮತ್ತು ನೆರೆ ರಾಜ್ಯಗಳ ಬಗ್ಗೆ ಹೇಳಿಕೆ ಕೊಡ್ತಾರೆ: ಬಿವೈವಿ

ಬಂಡ ಮುಖ್ಯಮಂತ್ರಿಗಳು ರಾಜ್ಯ ಮತ್ತು ನೆರೆ ರಾಜ್ಯಗಳ ಬಗ್ಗೆ ಹೇಳಿಕೆ ಕೊಡ್ತಾರೆ: ಬಿವೈವಿ

ಬೆಂಗಳೂರು: ಲೋಕಸಭಾ ಚುನಾವಣೆ ನಂತರ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿಡೀರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದರಿಂದ ಕರ್ನಾಟಕ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕರುಗಳು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.

ರಾಜ್ಯ ಸರ್ಕಾರ ಸಾರ್ವಜನಿಕರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಗ್ಯಾರೆಂಟಿ ಗ್ಯಾರಂಟಿ ಅಂತ ಭಾಷಣ ಮಾಡಿ ಇದೀಗ ಎಲ್ಲರ ಬದುಕಿಗೆ ಗೋರಂಟಿ ಹಾಕುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಮ್ಮ ಆಕ್ರೋಶ ಅವರ ಹಾಕಿದ್ದಾರೆ.

ಸೈಕಲ್ ಜಾತ ನಡೆಸುವ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಭಾರತಿ ಜನತಾ ಪಾರ್ಟಿ, ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಜಾಸ್ತಿ ಮಾಡಿದ್ದಾರೆ ಇದರ ವಿರುದ್ಧ ನಾವು ಪ್ರತಿಭಟನೆಯನ್ನು ಕೈಗೊಂಡಿದ್ದೇವೆ.

ಇಂದು ಕೂಡ ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಮಾಡುವ ಮೂಲಕ ರಾಜ್ಯ ಸರ್ಕಾರದ ನಿರ್ಧಾರಗಳ ವಿರುದ್ಧ ಪ್ರತಿಭಟನೆಯನ್ನು ಕೈಗೊಂಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನಟ ದರ್ಶನ್‌ ಜಾಮೀನು ಅರ್ಜಿ; ವಕೀಲರು ಹೇಳಿದ್ದೇನು?

ಇಂದು ಬೆಂಗಳೂರಿನಲ್ಲಿ ಸೈಕಲ್ ಜಾತಾ ಮೂಲಕ ಈ ಸರ್ಕಾರವನ್ನು ಎಚ್ಚರಿಸುವಂತಹ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಆದರೆ ಕಾಂಗ್ರೆಸ್ ಸರ್ಕಾರ ಬಂಡ ಸರ್ಕಾರ ಆಗಿರುವುದರಿಂದ ಯಾವುದೇ ತೀರ್ಮಾನಗಳನ್ನು ಹಿಂತೆಗೆದುಕೊಳ್ಳಲು ಪ್ರಯತ್ನ ಮಾಡುತ್ತಿಲ್ಲವೆಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆಕ್ರೋಶ ಅವರ ಹಾಕಿದ್ದಾರೆ.

ಬಂಡ ಮುಖ್ಯಮಂತ್ರಿಗಳು ರಾಜ್ಯ ಮತ್ತು ನೆರೆ ರಾಜ್ಯಗಳ ಬಗ್ಗೆ ಹೇಳಿಕೆಗಳನ್ನು ಕೊಡ್ತಾ ಇದ್ದಾರೆ ಆದರೆ ನಾನು ನಮ್ಮ ರಾಜ್ಯ ಈಗ ಸಂಕಷ್ಟದಲ್ಲಿದೆ ರೈತರು ಸಂಕಷ್ಟದಲ್ಲಿದ್ದಾರೆ. ಮತ್ತೊಂದು ಕಡೆ ಸಾಮಾನ್ಯ ಜನರ ಮೇಲೆ ಮತ್ತೊಂದು ಹೊರೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್. ಅಶ್ವತ್ಥ್‌ ನಾರಾಯಣ್, ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ. ಟಿ. ರವಿ, ಮಾಜಿ ಸಚಿವರು, ಶಾಸಕರು, ಪರಿಷತ್‌ ಸದಸ್ಯರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related