ಕೇಂದ್ರ ಸರ್ಕಾರ ಬರ ಪರಿಹಾರದ ಸಂಬಂಧ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಿದೆ: ಡಿಸಿಎಂ

ಕೇಂದ್ರ ಸರ್ಕಾರ ಬರ ಪರಿಹಾರದ ಸಂಬಂಧ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಿದೆ: ಡಿಸಿಎಂ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸರಿಯಾಗಿ ಮಳೆ ಬಾರದಿದ್ದ ಕಾರಣ ಬರಗಾಲ ಉಂಟಾಗಿದ್ದನ್ನು ನಾವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು ಕೂಡ ಕೇಂದ್ರ ಸರ್ಕಾರದಿಂದ ನಮ್ಮ ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರಕ್ಕೆ ನ್ಯಾಯಪಸೇ ಹಣ ಬಿಡುಗಡೆ ಮಾಡಿಲ್ಲವೆಂದು ಎಲ್ಲರಿಗೂ ಗೊತ್ತಿರುವ ಸಂಗತಿ.

ಇನ್ನು ಕೇಂದ್ರ ಸರ್ಕಾರದ ಅನ್ಯಾಯವನ್ನು ನಿರ್ಮಲಾ ಸೀತಾರಾಮ್ ಅವರು ಒಪ್ಪಿಕೊಂಡಿರುವ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿದ್ದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಬರ ಪರಿಹಾರದ ಕುರಿತು ನಿರ್ಮಲಾ ಸೀತಾರಾಮ ಅವರಿಗೆ ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು  ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳುಗಳಾಗಿವೆ? ನಾವು ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

 

Related