ನಿಮಿಷಾಂಭ ದೇವಸ್ಥಾನಕ್ಕೆ ಕೇಂದ್ರ ಸಚಿವರ ಭೇಟಿ

ನಿಮಿಷಾಂಭ ದೇವಸ್ಥಾನಕ್ಕೆ ಕೇಂದ್ರ ಸಚಿವರ ಭೇಟಿ

ಭಾರತ ಸರ್ಕಾರದ ವಿದ್ಯುತ್ ಮತ್ತು ಭಾರಿ ಕೈಗಾರಿಕೆಗಳ ರಾಜ್ಯ ಖಾತೆ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್  ರವರು ಶ್ರೀರಂಗಪಟ್ಟಣ ತಾಲ್ಲೂಕಿನ ಶ್ರೀ ನಿಮಿಷಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಮಾತನಾಡಿ ಅವರು ಮಂಡ್ಯ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮವನ್ನು ಇಂದಿನಿಂದ  ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಶ್ರೀ ನಿಮಿಷಾಂಭ ದೇವಿಯ ಆಶೀರ್ವಾದ ಪಡೆದು ಪ್ರಾರಂಭಿಸಲಾಗುತ್ತಿದೆ ಎಂದರು.

ಇದೇ ವೇಳೆ ಅಬಕಾರಿ ಹಾಗೂ ಮಂಡ್ಯ ಜಿಲ್ಲಾ  ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಮಾತನಾಡಿ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ರೈತರಿಗೆ ಪಿ.ಎಂ.ಕಿಶಾನ್ ಯೋಜನೆ, ಸಾರ್ವಜನಿಕರಿಗೆ  ಆಯುಷ್ಮಾನ್ ಆರೋಗ್ಯ ಕಾರ್ಡ್, ಕುಡಿಯುವ ನೀರು ಒದಗಿಸಲು ಜಲ್ ಜೀವನ್ ಮಿಷನ್,   ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜನ ಸಾಮಾನ್ಯರಿಗೆ ಯೋಜನೆಗಳು ಸಮರ್ಪಕವಾಗಿ ತಲುಪಿದಿಯೇ ಎಂಬುದರ ಕುರಿತು ಸಂವಾದ ಮಾಡಲು ಭಾರತ ಸರ್ಕಾರದ ವಿದ್ಯುತ್  ಮತ್ತು ಭಾರಿ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್  ರವರನ್ನು    ಹಾಸನ ಮತ್ತು ಮಂಡ್ಯ ಜಿಲ್ಲೆಗೆ ನೇಮಕ  ಮಾಡಲಾಗಿದೆ ಎಂದರು.

ಕೇಂದ್ರ ಸಚಿವರು ಪ್ರತಿತಿಂಗಳು 3 ದಿನ  ಒಂದೊಂದು ತಾಲ್ಲೂಕಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದಿಂದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಫಲಾನುಭವಿಗಳೊಂದಿಗೆ ಸಂವಾದ ಮಾಡಿ ಅವರ ಸ್ಥಿತಿಗತಿಯನ್ನು ತಿಳಿಯಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ.ನಾರಾಯಣಗೌಡ  ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಶ್ರೀರಂಗಪಟ್ಟಣದ ತಹಶೀಲ್ದಾರ್ ಶ್ವೇತಾ ಎನ್. ಸೇರಿದಂತೆ ಇತರರು ಉಪಸ್ಥಿತರಿದ್ದರು.

Related