ಉಪೇಂದ್ರ ನಿರ್ದೇಶಿಸಿ, ನಟಿಸಿರುವ ನೂತನ ಚಿತ್ರಕ್ಕೆ ಮುಹೂರ್ತ.

ಉಪೇಂದ್ರ ನಿರ್ದೇಶಿಸಿ, ನಟಿಸಿರುವ ನೂತನ ಚಿತ್ರಕ್ಕೆ ಮುಹೂರ್ತ.

ಕನ್ನಡ ಸಿನಿಮಾ ರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಉಪೇಂದ್ರ ‘ಉಪ್ಪಿ ೨’ ಚಿತ್ರದ ನಂತರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶಿಸಿ, ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ  ಸುದೀಪ್ ಆರಂಭ ಫಲಕ ತೋರಿದರೆ,  ಶಿವರಾಜಕುಮಾರ್ ಕ್ಯಾಮೆರಾ ಚಾಲನೆ ನೀಡಿದರು.

ಲಹರಿ ಫಿಲಂಸ್ ಹಾಗೂ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶನದೊಂದಿಗೆ ಉಪೇಂದ್ರ ನಾಯಕರಾಗಿ ನಟಿಸುತ್ತಿದ್ದಾರೆ. ಮೂರುನಾಮದ ಚಿಹ್ನೆಯೊಂದು ಈ ಚಿತ್ರದ ಶೀರ್ಷಿಕೆಯಾಗಿದೆ. ಇದನ್ನು ಕೆಲವರು ಮೂರು ನಾಮ ಅಂದುಕೊಂಡರೆ, ಮತ್ತೆ ಕೆಲವರು ಯು ಮತ್ತು ಐ ಅಂದುಕೊಳ್ಳುತ್ತಾರೆ. ನಾನು ಮತ್ತು ನೀನು ಎಂಬ ಅರ್ಥ ಬರುವ ಹಾಗಿದೆ ಆ ಚಿಹ್ನೆ.

ಈ ಕುರಿತು ಮಾತನಾಡಿದ ಉಪೇಂದ್ರ, “ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದೇವೆ. ಲಹರಿ ಸಂಸ್ಥೆಯವರು ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ವಿಭಿನ್ನ ಶೀರ್ಷಿಕೆ ಯಿಟ್ಟಿದ್ದೀನಿ. ನಿಮಗೆಲ್ಲಾ ಏನು ಅನಿಸುತ್ತದಯೋ, ಅದೇ ಶೀರ್ಷಿಕೆ ಆಗಿರುತ್ತದೆ. ನಾನು ನನ್ನ ನಿರ್ದೇಶಕರ ತಂಡ ಹಾಗೂ ಇನ್ನೂ ಕೆಲವರ ಬಳಿ ಕಥೆಯ ಬಗ್ಗೆ ಹೇಳಿರುತ್ತೇನೆ. ಅವರಿಗೆ ಅದನ್ನು ಹೇಳಲು ಬರುವುದಿಲ್ಲ ಎಂದ ಉಪೇಂದ್ರ. ಒಟ್ಟಿನಲ್ಲಿ ಉತ್ತಮ ಚಿತ್ರವೊಂದನ್ನು ನಿಮ್ಮ ಮುಂದೆ ಇಡುತ್ತೇನೆ” ಎಂದಿದ್ದಾರೆ.

Related