ಪ್ರಜ್ವಲ್ ರೇವಣ್ಣ ಆಯ್ತು; ಇದೀಗ ಸೂರಜ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ..!

ಪ್ರಜ್ವಲ್ ರೇವಣ್ಣ ಆಯ್ತು; ಇದೀಗ ಸೂರಜ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ..!

ಹಾಸನ: ದೇಶ ಮಾತ್ರವಲ್ಲದೆ ವಿದೇಶಗಳಲ್ಲಿ ಸುದ್ದಿಯಾಗಿದ್ದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಇನ್ನು ಮಾಸಿಲ್ಲ. ಇದರ ಬೆನ್ನಲ್ಲೇ ಮತ್ತೆ ಇದೀಗ ಪ್ರಜ್ವಲ್ ರೇವಣ್ಣ ಅವರ ಸಹೋದರ ಸೂರಜ್ ರೇವಣ್ಣ ಅವರು ಕೂಡ ಲೈಂಗಿಕ ದೌರ್ಜನ್ಯ ಆರೋಪವನ್ನು ಎದುರಿಸುತ್ತಿದ್ದಾರೆ.

ಹೌದು, ಪ್ರಜ್ವಲ್‌ ಸಹೋದರ ಸೂರಜ್‌ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದ್ರೆ, ಇತ್ತ ಆರೋಪ ಮಾಡಿರುವ ಜೆಡಿಎಸ್​ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್‌ ಕಾರ್ಯಕರ್ತ ದೂರು ನೀಡಿದ್ದರು. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: D ಗ್ಯಾಂಗ್​ ಹೆಸರಲ್ಲಿ‌ ಸಿಸಿಮಾ ಬರ್ತಿದ್ಯಾ?

ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. 5 ಕೋಟಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿದೆ.

 

Related