ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ; ತನಿಖೆ ಚುರುಕುಗೊಳಿಸಿದ ಸಿಐಡಿ ತಂಡ

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ; ತನಿಖೆ ಚುರುಕುಗೊಳಿಸಿದ ಸಿಐಡಿ ತಂಡ

ಶಿವಮೊಗ್ಗ:  ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮ ಬೆಂಗಳೂರಿನಲ್ಲಿ ಚಂದ್ರಶೇಖರ್ ಪಿ ಎಂಬವರು 87 ಕೋಟಿ ಹಗರಣ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಈಗ ಸಿಐಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.

ಹೌದು, ವಾಲ್ಮೀಕಿ ನಿಗಮ ಬೆಂಗಳೂರಿನಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಶೇಖರ್ ಪಿ ಅವರು ಶಿವಮೊಗ್ಗದ ವಿನೋಬನಗರದಲ್ಲಿಆತ್ಮೀಯತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರೇವಣ್ಣ ಸಲ್ಲಿಸಿದ ಅರ್ಜಿ ಗೆ ಕೋರ್ಟ್ ಅಸ್ತು ಅನ್ನುತ್ತಾ..?

ಇನ್ನು ಆತ್ಮಹತ್ಯೆ ಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಚುರುಕಿನ ತನಿಖೆಯನ್ನು ನಡೆಸುತ್ತಿದ್ದು ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿ ಅವರ ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್‌ಪಿ ಮೊಹಮ್ಮದ್‌ ರಫಿ ನೇತೃತ್ವದ 6 ಮಂದಿ ತಂಡ ಭೇಟಿ ನೀಡಿ, ಮೃತ ಅಧಿಕಾರಿ ಚಂದ್ರಶೇಖರನ್ ಪತ್ನಿ ಕವಿತಾರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಚಂದ್ರಶೇಖರನ್‌ರಿಗೆ ಸಂಬಂಧಿಸಿದ ದಾಖಲೆ ಪರಿಶೀಲಿಸಿ ಸಾಕ್ಷಾಧಾರಗಳನ್ನು ಕಲೆಹಾಕಿದ ಸಿಐಡಿ ಅಧಿಕಾರಿಗಳು ಸಾಕ್ಷಾಧಾರ ಪರಿಶೀಲನೆ ವೇಳೆ ದೊರಕಿದ ಚಂದ್ರಶೇಖರನ್ ಬ್ಯಾಗ್‌, ಬ್ಯಾಗ್‌ನಲ್ಲಿದ್ದ ಪೆನ್ ಡ್ರೈವ್ ಹಾಗೂ ಲ್ಯಾಪ್‌ಟಾಪ್ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪೆನ್‌ ಡ್ರೈವ್‌ ಮೇಲೆ ಪದ್ಮನಾಭ್‌ ಎಂದು ಬರೆದಿದೆ ಎನ್ನಲಾಗಿದೆ.

ಸಿಐಡಿ ಅಧಿಕಾರಿಗಳು ಭೇಟಿ ನೀಡಿದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಚಂದ್ರಶೇಖರನ್‌ ಪತ್ನಿ ಕವಿತಾ, ಸಿಐಡಿ ಅಧಿಕಾರಿಗಳು ಸುಮಾರು 45 ನಿಮಿಷ ವಿಚಾರಣೆ ನಡೆಸಿದರು. ಮನೆಯಲ್ಲಿದ್ದ ಪದ್ಮನಾಭ ಹೆಸರಿನ ಪೆನ್‌ ಡ್ರೈವ್‌ ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಏನಿದೆ ಎಂದು ಕೇಳಿದರೂ ಅಧಿಕಾರಿಗಳು ತೋರಿಸಿದೆ ಹಾಗೆ ಹೋದರು. ವಶಪಡಿಸಿಕೊಂಡ ವಸ್ತುಗಳ ಕುರಿತ ಮಹಜರು ಸಹಿಗೆ ಅರ್ಧ ಗಂಟೆ ಬಿಟ್ಟು ಪೊಲೀಸ್ ಠಾಣೆಗೆ ಬರುವಂತೆ ಹೇಳಿ ಹೋಗಿದ್ದಾರೆ. ಅಧಿಕಾರಿಗಳ ಈ ನಡೆ ಅನುಮಾನ ಹುಟ್ಟಿಸಿದೆ ಎಂದು ಚಂದ್ರಶೇಖರ್ ಕುಟುಂಬಸ್ಥರು ತಿಳಿಸಿದ್ದಾರೆ.

 

Related