ಹಿರಿಯ ಪತ್ರಕರ್ತ `ಚಂದನ್ ಮಿತ್ರಾ’ ನಿಧನ

ಹಿರಿಯ ಪತ್ರಕರ್ತ `ಚಂದನ್ ಮಿತ್ರಾ’ ನಿಧನ

ನವದೆಹಲಿ : ಬಿಜೆಪಿ ರಾಜ್ಯಸಭಾ ಮಾಜಿ ಸದಸ್ಯ, ಹಿರಿಯ ಪತ್ರಕರ್ತ ಚಂದನ್ ಮಿತ್ರಾ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. 66 ವರ್ಷ ವಯಸ್ಸಾಗಿತ್ತು.
ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಚಂದನ್ ಮಿತ್ರ 2018ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು. ಮೂಲತಃ ಪಶ್ಚಿಮ ಬಂಗಾಳದ ಹೌರಾಹ್ ನವರು. ದೆಹಲಿಯ ಪತ್ರಿಕೆಯೊಂದರ ಸಂಪಾದಕರಾಗಿದ್ದರು. ಬಿಜೆಪಿ ಪಕ್ಷದ ರಾಜ್ಯಸಭಾ ಸದಸ್ಯರಾಗಿ 2010ರಲ್ಲಿ ಮಧ್ಯಪ್ರದೇಶದಿಂದ ಆಯ್ಕೆಯಾಗಿದ್ದರು..
ಮಿತ್ರಾ ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಅಪಾರ ಬುದ್ಧಿ ಶಕ್ತಿ ಮತ್ತು ಒಳನೋಟ ಹೊಂದಿದ್ದವರು. ಮಾಧ್ಯಮ ಮತ್ತು ರಾಜಕೀಯ ಜೀವನದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ತುಂಬ ನೋವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Related