ತೆಲುಗು ಹಿರಿಯ ನಟ ಚಂದ್ರ ಮೋಹನ್ ವಿಧಿವಶ

ತೆಲುಗು ಹಿರಿಯ ನಟ ಚಂದ್ರ ಮೋಹನ್ ವಿಧಿವಶ

ತೆಲುಗು ಚಿತ್ರರಂಗದ ಹಿರಿಯ ನಟ ಚಂದ್ರಮೋಹನ್ (82 ವರ್ಷ) ಇಂದು (ನ.11 ಶನಿವಾರ) ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಕೆಲವು ತಿಂಗಳುಗಳಿಂದ ಬಳಲುತ್ತಿದ್ದ ಅವರು ಇಂದು ಕೊನೆಯ ಉಸಿರುಳಿದಿದ್ದಾರೆ.

ಹಲವು ದಶಕಗಳಿಂದಲೂ ತೆಲುಗು ಚಿತ್ರರಂಗದಲ್ಲಿ ನಟಿಸುತ್ತಿದ್ದ ಚಂದ್ರ ಮೋಹನ್ ನಿಧನಕ್ಕೆ ತೆಲುಗು ಚಿತ್ರರಂಗದ ದಿಗ್ಗಜ ನಟ, ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್​ನ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಿಗ್ಗೆ 9:57ಕ್ಕೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ. ನವೆಂಬರ್ 13ಕ್ಕೆ ಚಂದ್ರಮೋಹನ್ ಅವರ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಅವರ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ. ಶನಿವಾರ ಮತ್ತು ಭಾನುವಾರ ಚಂದ್ರಮೊಹನ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

 

Related