ಆತ್ಮಹತ್ಯೆಗೆ ಶರಣಾದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ..!!

ಆತ್ಮಹತ್ಯೆಗೆ ಶರಣಾದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ..!!

ಬೆಂಗಳೂರು, ಜೂ 15 : ವಿಕ್ಟೋರಿಯಾ ಆಸ್ಪತ್ರೆ ವೈದ್ಯರೊಬ್ಬರು ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪೃಥ್ವಿಕಾಂತ್ ರೆಡ್ಡಿ (31) ಆತ್ಮಹತ್ಯೆ ಮಾಡಿಕೊಂಡ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ. ಆಂಧ್ರಮೂಲದ ಪೃಥ್ವಿಕಾಂತ್ ಮೂರು ತಿಂಗಳ ಹಿಂದೆ ವೈದ್ಯೆಯನ್ನು ಮದುವೆಯಾಗಿದ್ದರು.

ಇಂದು ಬೆಳಗ್ಗೆ 5 ಗಂಟೆಗೆ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ ಅಪಾರ್ಟ್ಮೆಂಟ್​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೃಥ್ವಿಕಾಂತ್ ರೆಡ್ಡಿ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು.

Related