ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್

ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್

ಬೆಂಗಳೂರು, ಏ.20 : ಬಿ ಖಾತಾ ಆಸ್ತಿಗಳನ್ನು ಎ ಖಾತಾಗಳಾಗಿ ಪರಿವರ್ತಿಸುವುದು, ಹೊಸ ವಲಯಗಳಲ್ಲಿನ ಆಸ್ತಿಗಳ ಖಾತಾ ನಕಲು ಮತ್ತು ಖಾತಾ ದೃಢೀಕರಣ ಪತ್ರಗಳ ಗಣಕೀಕರಣ, ಶುಲ್ಕ ದ್ವಿಗುಣ, ಉದ್ಯಮ ಪರವಾನಗಿ ವ್ಯವಸ್ಥೆ ಸರಳೀಕರಣ, ನಾಡಪ್ರಭು ಕೆಂಪೇಗೌಡರ ಹೆಸರಲ್ಲಿ ಹೊಸದಾಗಿ ಶಾಲೆ ನಿರ್ಮಾಣ, ಸ್ಮಾರ್ಟ್ ಶಿಕ್ಷಣ ವ್ಯವಸ್ಥೆ, ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಹಲವು ಕಾರ್ಯಕ್ರಮಗಳು ಸೇರಿದಂತೆ ಬಿಬಿಎಂಪಿ 2020-21ನೆ ಸಾಲಿನ 10,899.23 ಕೋಟಿ ಆಯವ್ಯಯವನ್ನು ಇಂದು ಮಂಡಿಸಿತು.
ಮೇಯರ್ ಗೌತಮ್ಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆದ ಪಾಲಿಕೆ ಸಭೆಯಲ್ಲಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಅವರು ಬಜೆಟ್ ಮಂಡನೆ ಮಾಡಿದರು.ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಪಾಲಿಕೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ ಮಾಡಲಾಯಿತು.

Related